ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ – News Kadaba

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣದಲ್ಲಿ ಕಳೆದ 33 ದಿನಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದು, ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಲುಫ್ತಾನ್ಸಾ LH764 ವಿಮಾನದ ಮೂಲಕ ಜರ್ಮನಿಯ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಬ್ಯುಸಿನೆಸ್​​ ಕ್ಲಾಸ್​​ ನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಜ್ವಲ್ ನನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಬರುವುದಾಗಿ ಪ್ರಜ್ವಲ್​ ವಿಡಿಯೋ ಬಿಡುಗಡೆ ಮಾಡಿದ್ದರಾದರೂ ಆತ ಎಲ್ಲಿಂದ ವಿಡಿಯೋ ಮಾಡಿರುವುದು ಎನ್ನುವುದು ಗೊತ್ತಾಗಿರಲಿಲ್ಲ. ಬಳಿಕ ಎಸ್​ಐಟಿ ಅಧಿಕಾರಿಗಳು ಐಪಿ ಅಡ್ರೆಸ್ ಪತ್ತೆಹಚ್ಚಿದಾಗ ಯೂರೋಪ್​​ನ ಹಂಗೇರಿಯಿಂದ ವಿಡಿಯೋ ಮಾಡಿದ್ದಾಗಿ ತಿಳಿದುಬಂದಿತ್ತು.

Scroll to Top