ಕಡಬ: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟಗೊಂಡು ಮನೆಗೆ ಹಾನಿ, ದಾಖಲೆ ಪತ್ರ ನಾಶ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಮನೆಯೊಳಗಿದ್ದ ರೆಫ್ರಿಜರೇಟರೊಂದು ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.

ಕಡಬದ ಅಡ್ಡಗದ್ದೆ ಅಂಗನವಾಡಿ ಸಮೀಪದ ನಿವಾಸಿ ಫಾರೂಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ ಅಪರಾಹ್ನ ಸಂಭವಿಸಿದೆ. ಮಧ್ಯಾಹ್ನದ ವೇಳೆ ಫಾರೂಕ್ ಅವರು ತನ್ನ ಪತ್ನಿ ಸಹಿತ ಮಕ್ಕಳ ಸಹಿತ ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರೂಕ್ ಅವರು ತಹಶೀಲ್ದಾರ್ ಕಚೇರಿ ಬಳಿ ಇರುವ ತನ್ನ ಅಂಗಡಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಅವಘಡ ಸಂಭವಿಸಿದ್ದು ದೊಡ್ಡ ದುರಂತವೊಂದು ತಪ್ಪಿದೆ. ಸುಮಾರು ಐದು ವರ್ಷಗಳ ಹಿಂದೆ ಅವರು ರೆಫ್ರಿಜರೇಟರ್ ಖರೀದಿಸಿದ್ದರು. ಮನೆಯ ಸುತ್ತ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಸಂಶಯಗೊಂಡು ನೋಡಿದಾಗ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದ್ದಾರೆ.

error: Content is protected !!
Scroll to Top