ಬೆಳ್ಳಾರೆ: ಹಾಡಹಗಲೇ ಕಲ್ಲು ಎತ್ತಿ ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ‌ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.10. ಬೆಳ್ಳಾರೆ ಪೇಟೆಯಲ್ಲಿರುವ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಮೇಲ್ನೋಟಕ್ಕೆ ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ. ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

error: Content is protected !!
Scroll to Top