(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.15. ಸರಕಾರದಿಂದ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲಾಗಿರುವ ರಾಜ್ಯದ ನರ್ಸಿಂಗ್ ಕಾಲೇಜುಗಳ ಆಡಳಿತ ಮಂಡಳಿಗೆ ರಾಜ್ಯ ಸರಕಾರವು ಶಾಕ್ ನೀಡಿದೆ.
ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವ ಕಾಲೇಜುಗಳನ್ನು ತಪಾಸಣೆ ನಡೆಸಿ ನಡೆಸಿ ಬೀಗ ಜಡಿಯಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು, ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಕಾಲೇಜು ಪ್ರಾರಂಭಕ್ಕೂ ಮುನ್ನ ಅಧಿಕಾರಿಗಳು ಪ್ರತಿಯೊಂದು ಕಾಲೇಜುಗಳಿಗೆ ಭೇಟಿ ನೀಡಬೇಕು. ಯಾವ ಕಾಲೇಜು ಸರ್ಕಾರದ ಮಾನದಂಡ ಪಾಲನೆ ಮಾಡಿರುವುದಿಲ್ಲವೋ, ಅಂತಹ ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.