ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.26. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 27 ಗುರುವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

Also Read  ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

error: Content is protected !!
Scroll to Top