(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.