ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ನಿಲ್ಲಿಸಿದ್ದ ಲಾರಿಗೆ ಟ್ರಾವೆಲ್ಲರ್ ಢಿಕ್ಕಿ – 13 ಜನರ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ.28. ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ವಾಹನವೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟ ದಾರುಣ ಘಟನೆ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಅವರು ಟಿಟಿ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಗುಂಡಿನ ಹಳ್ಳಿ ಕ್ರಾಸ್ ಬಳಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಟಿಟಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಲಾರಿಗೆ ಢಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮೃತದೇಹಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದ್ದು, ಸ್ಥಳಕ್ಕೆ ಹಾವೇರಿ ಜಿಲ್ಲಾ ಎಸ್ಪಿ ಅಂಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top