(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.06 ಶನಿವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.06 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.