ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.17. ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ಮಾರಕಾಸ್ತ್ರಗಳೊಂದಿಗೆ ಬೆದರಿಸಿ, ಹಣ ಹಾಗೂ ಚಿನ್ನಾಭರಣ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪಣಂಬೂರು ಪೊಲೀಸರು ಶುಕ್ರವಾರದಂದು ಮೂವರನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಬಂಧಿತರನ್ನು ಉಡುಪಿ ಅಂಬಲಪಾಡಿ ನಿವಾಸಿ ಪ್ರದೀಪ್ ಕುಮಾರ್(47), ಕುದ್ರೋಳಿ ನಿವಾಸಿ ಸುನೀಲ್(20), ಬೋಳಾರ ನಿವಾಸಿ ಚರಣ್(32) ಎಂದು ಗುರುತಿಸಲಾಗಿದೆ. ಬಂಧಿತರಿಂದ ತಲವಾರು, ಮೆಣಸಿನ ಹುಡಿ, ರೋಪ್ ವಶಪಡಿಸಿಕೊಂಡಿದ್ದಾರೆ. ತಣ್ಣೀರುಬಾವಿಯಲ್ಲಿ ಇತ್ತೀಚೆಗೆ ನಡೆದ ಶಿವರಾಜ್‌ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಆರೋಪಿ ಅನೀಶ್ ಕಡೆಯವರನ್ನು ಕೊಲೆ ಮಾಡಿ ಹೊರ ರಾಜ್ಯಕ್ಕೆ ಪರಾರಿಯಾಗಲು ಹಣದ ಅವಶ್ಯಕತೆ ಇದ್ದುದರಿಂದ ಹೆದ್ದಾರಿ ದರೋಡೆ ನಡೆಸಲು ನಿಂತಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಪಿಎಸ್‌ಐ ಉಮೇಶ್ ಕುಮಾರ್ ಹಾಗೂ ಸಿಬ್ಬಂದಿಗಳು ಮತ್ತು ಮಂಗಳೂರು ಉತ್ತರ ವಿಭಾಗ ರೌಡಿ ನಿಗ್ರಹ ದಳದ ಸಿಬ್ಬಂದಿಗಳನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದಾಗ ಐವರು ಆರೋಪಿಗಳು ದ್ವಿಚಕ್ರ ವಾಹನದೊಂದಿಗೆ ದುಷ್ಕೃತ್ಯ ನಡೆಸಲು ನಿಂತಿರುವುದು ಗಮನಕ್ಕೆ ಬಂದಿದೆ. ಪೊಲೀಸರನ್ನು ಕಂಡಾಗ ಆರೋಪಿಗಳು ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ತಾಲೂಕು ಭೇಟಿ

error: Content is protected !!
Scroll to Top