ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 16. ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿದ್ದು, ಇದರ ನಡುವೆ ಆನೆಯ ಮೃತದೇಹವೊಂದು ನದಿಯಲ್ಲಿ ತೇಲಿಬಂದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿದ್ದು, ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ನೀರು ಎಷ್ಟಿದೆ ಎಂದು ನೋಡಲು ತೆರಳಿದ ಮನ್ಮಥ ಬಟ್ಟೋಡಿ ಎಂಬುವರಿಗೆ ಆನೆಯ ಮೃತ ದೇಹವೊಂದು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಅವರು ವೀಡಿಯೋದಲ್ಲಿ ಆನೆಯ ಮೃತದೇಹ ತೇಲಾಡುವ ದೃಶ್ಯವನ್ನು ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Also Read  ಅಡ್ಯನಡ್ಕ: 'ಆರಾಧನೆ' ಕವನ ಸಂಕಲನ ಬಿಡುಗಡೆ

error: Content is protected !!
Scroll to Top