ನಾಳೆ (ಜು. 19) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 19ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

error: Content is protected !!