ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.20. ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ ಎನ್ನಲಾಗಿದೆ.

ಯುವಕನನ್ನು ಮಹೀಂದ್ರ ಶೋರೂಂ ಉದ್ಯೋಗಿ ಸನ್ಮಿತ್ (21) ಎಂದು ತಿಳಿದುಬಂದಿದೆ. ಈತನ ಸ್ಕೂಟರ್  ಹೊಳೆಯ ಬದಿಯಿಂದ 150 ಮೀ ದೂರದಲ್ಲಿ ನಿಲ್ಲಿಸಿದ್ದ ಎನ್ನಲಾಗಿದೆ.

ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ ಪ್ರಶ್ನೆಗೆ ಪೊಲೀಸ್‌ ತನಿಖೆಯ ಬಳಿಕ ಉತ್ತರ ಸಿಗಬೇಕಾಗಿದೆ ಎಂದು ವರದಿಯಾಗಿದೆ.

Also Read  ಇಂದಿನ ಹವಮಾನ ವರದಿ

 

error: Content is protected !!