ದ್ವಿ ಚಕ್ರ ವಾಹನಕ್ಕೆ ನಾಯಿಯ ಶವ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಉಡುಪಿ, ಜು.20. ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ವ್ಯಕ್ತಿ ನಾಯಿಯ ಕುತ್ತಿಗೆಗೆ ಸರಪಳಿಯನ್ನು ಜೋಡಿಸಿ ನಂತರ ತನ್ನ ಸ್ಕೂಟರ್‌ ನ ಸೀಟಿಗೆ ಇನ್ನೊಂದು ತುದಿಯನ್ನು ಕಟ್ಟಿದ್ದಾನೆ. ವ್ಯಕ್ತಿಗಾಗಿ ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕರು ಕ್ರೂರ ಕೃತ್ಯವನ್ನು ಖಂಡಿಸಿದ್ದು ಮುಂದೆ ಇಂತಹ ಘಟನೆಗಳು ನಡೆಯದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Also Read  ಉಚಿತ ಬಸ್ ಪ್ರಯಾಣಕ್ಕೆ ಗುರುತಿನ ಚೀಟಿ ಕಡ್ಡಾಯ

 

error: Content is protected !!
Scroll to Top