ಬಂಗ್ಲೆಗುಡ್ಡೆ: ದರೋಡೆ ಪ್ರಕರಣ ಬೇಧಿಸಿದ ಪೊಲೀಸರು ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.17. ಇದೇ ತಿಂಗಳ 04 ನೇ ತಾರೀಕಿನಂದು ಮುಂಜಾನೆ ಕಾರ್ಕಳದ ಬಂಗ್ಲೆಗುಡ್ಡೆ ಎಂಬಲ್ಲಿ ಮನೆಗೆ ನುಗ್ಗಿ ದಂಪತಿಗೆ ಥಳಿಸಿ 21 ಪವನ್‌ ಚಿನ್ನಾಭರಣ ಹಾಗೂ ಒಂದು ಲಕ್ಷ ಹಣವನ್ನು ದೋಚಿದ್ದ ಪ್ರಕರಣವನ್ನು ಬೇಧಿಸಿರುವ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಭಟ್ಕಳ ನಿವಾಸಿಗಳಾದ ಮಹ್ರೂಫ್(21), ಹಾಗೂ ನಟರಾಜ್(24) ಎಂದು ಗುರುತಿಸಲಾಗಿದೆ. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಲ್ಲಿಬ್ಬರಾದ ಉಡುಪಿ ಬೆಳಪು ನಿವಾಸಿ ಸಾಜಿದ್‌ ರೆಹಮಾನ್‌ (19) ಮತ್ತು ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ ಅಮಿರುದ್ದೀನ್‌(27) ಎಂಬವರನ್ನು ಈ ಹಿಂದೆಯೇ ಬಂಧಿಸಿ ಇವರಿಂದ 6500 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆರೋಪಿಗಳು ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ.

Also Read  ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ

error: Content is protected !!
Scroll to Top