ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯು ಇಂದು (ಜು.22) ಪೂರ್ವಾಹ್ನ 10.30ಕ್ಮೆ ಸರಿಯಾಗಿ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ದಯಾನಂದ ರೈ ಮನವಳಿಕೆ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ವಹಿಸಲಿದ್ದು, ವಿಜಯ ಕರ್ನಾಟಕ ಮಂಗಳೂರು ಉಪ ಸಂಪಾದಕರಾದ ಸುಧಾಕರ ಸುವರ್ಣ ತಿಂಗಳಾಡಿ ಉಪನ್ಯಾಸ ನೀಡಲಿದ್ದಾರೆ. ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸಲಿದ್ದು, ಹಿರಿಯ ಪತ್ರಿಕಾ ವಿತರಕರಾದ ನಾರಟಯಣಿ ಭಟ್ ರವರು ಸನ್ಮಾನ ಸ್ವೀಕರಿಸಲಿದ್ದಾರೆ.

Also Read  ಶ್ರೀಗಂಧದ ಮರ ಕಳ್ಳತನ ಪ್ರಕರಣ ➤ ಮೂವರು ಖಾಕಿ ಬಲೆಗೆ..!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ಪ್ರೊಬೆಷನರಿ IAS ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಪ್ರೊಬೆಷನರಿ IFS ಅಧಿಕಾರಿ ಅಕ್ಷಯ್ ಪ್ರಕಾಶ್ಕರ್ ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top