ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು.

ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ.

Also Read  ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು

 

error: Content is protected !!
Scroll to Top