ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.!

(ನ್ಯೂಸ್ ಕಡಬ)newskadaba.com ಜಮ್ಮು, ಜು.22. ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧನಿಗೆ ತೀವ್ರ ಗಾಯವಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.


ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿ ದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ. ಘಟನೆಯ ನಂತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Scroll to Top