ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.


ಮೃತರನ್ನು ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ ನಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Scroll to Top