(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಇನ್ನು ಹಗರಣ ಸಂಬಂಧಪಟ್ಟಂತೆ ಸತ್ಯನಾರಾಯಣ ವರ್ಮನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಪ್ರಸ್ತುತ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಇಡಿ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಸತ್ಯನಾರಾಯಣ ವರ್ಮನನ್ನು ವಿಚಾರಣೆಗೆ ಒಳಪಡಿಸಿದ್ದರು.