ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಈ ಬಾರಿ ಸುರಿದ ಭಾರಿ ಮಳೆಗೆ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಾಗಿ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು. ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು ಎನ್ನಲಾಗಿದೆ.

Also Read  ಉಜಿರೆ: ಮುಖಕ್ಕೆ ಟೇಪ್ ಸುತ್ತಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ

 

error: Content is protected !!
Scroll to Top