(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.23. ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.
ಮೃತರನ್ನು ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಗುರುತಿಸಲಾಗಿದೆ. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
