2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದ್ದು, ಎಲ್ಲಾ ವಿಭಾಗಗಳಲ್ಲಿ ತೆರಿಗೆದಾರರಿಗೆ ಲಾಭದಾಯಕವಾಗುವಂತೆ ಆದಾಯ ತೆರಿಗೆ ರಚನೆಯಲ್ಲಿನ ಬದಲಾವಣೆಗಳ ಮೇಲೆ ಮತ್ತು ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡುವುದನ್ನು ಸುಧಾರಿಸುವ ಕುರಿತು ಬಜೆಟ್ ನಲ್ಲಿ ಮಂಡನೆ ಮಾಡಿದ್ದಾರೆ ಎನ್ನಲಾಗಿದೆ. ನಿರ್ಮಲಾ ಸೀತಾರಾಮನ್ ಅವರ ಸತತ ಏಳನೇ ಕೇಂದ್ರ ಬಜೆಟ್ ಮಂಡನೆ ಇದು ಆಗಿರುವುದರಿಂದ, ಈ ಹಿಂದೆ ಸತತ ಆರು ಬಾರಿ ಬಜೆಟ್‌ ಮಂಡಿಸಿದ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಮೀರಿಸುತ್ತಾರೆ.

Also Read  ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!!

error: Content is protected !!
Scroll to Top