1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್‌ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ ಎನ್ನಲಾಗಿದೆ.

ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಗೆ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.

Also Read  ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ

ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಈ ಸೌಲಭ್ಯ ನೀಡಲಾಗುತ್ತಿದೆ. ಪಿರ್‌ಪೈಂಟ್‌ನಲ್ಲಿ ಹೊಸ 2,400 ಮೆಗಾವ್ಯಾಟ್ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವುದು ಸೇರಿದಂತೆ 21,400 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಯೋಜನೆಗಳನ್ನು ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

error: Content is protected !!
Scroll to Top