2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳುವುದು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಎಂದು ಹೇಳಿದರು. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು ನಿರ್ಧಾರವನ್ನು ಈ ಬಜೆಟ್​​ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ. ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದ್ದಾರೆ. ಹಾಗೂ ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

Also Read  ಪ್ರಧಾನಿ ಭೇಟಿ ವೇಳೆ ಭದ್ರತಾ ವೈಫಲ್ಯ➤ ಪೊಲೀಸರ ವಿರುದ್ದ ಶಿಸ್ತುಕ್ರಮ

error: Content is protected !!
Scroll to Top