ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಐಟಿ,ಐಟಿಇಎಸ್, ಬಿಪಿಒ ವಲಯದ ಉದ್ಯೋಗಿಗಳ ಕೆಲಸದ ಅವಧಿಯನ್ನು ವಿಸ್ತರಿಸುವ ಪ್ರಸ್ತಾವನೆ ಐಟಿ ಉದ್ಯಮದಿಂದ ಬಂದಿದ್ದು, ಕ್ಷೇತ್ರದ ನಾಯಕರು ಮತ್ತು ಉದ್ಯೋಗಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಅಭಿಪ್ರಾಯ ಸಂಗ್ರಹಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.


ಐಟಿ ಉದ್ಯೋಗಿಗಳ ಒಕ್ಕೂಟ ತಮ್ಮ ಅಸಮ್ಮತಿ ವ್ಯಕ್ತಪಡಿಸಿದ್ದು, ಉದ್ಯಮದ ಅನುಭವಿಗಳು ಮತ್ತು ನಾಯಕರು ಸಹ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದರು. ಪ್ರಸ್ತಾವಿತ ‘ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ 2024, ಕೆಲಸದ ದಿನವನ್ನು 14 ಗಂಟೆಗಳಿಗೆ ಸಾಮಾನ್ಯಗೊಳಿಸಲು ಪ್ರಯತ್ನಿಸುತ್ತದೆ. ಅಸ್ತಿತ್ವದಲ್ಲಿರುವ ಕಾಯಿದೆಯು ಓವರ್‌ಟೈಮ್ (ಧೀರ್ಘಾವಧಿ) ಸೇರಿದಂತೆ ದಿನಕ್ಕೆ ಗರಿಷ್ಠ 10 ಗಂಟೆಗಳ ಕೆಲಸವನ್ನು ಮಾತ್ರ ಅನುಮತಿಸುತ್ತದೆ ಎನ್ನಲಾಗಿದೆ.

Also Read  ರೈಲ್ವೇ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ..!! ➤ಭೋಜ್ಪುರಿ ಗಾಯಕ ಅರೆಸ್ಟ್

error: Content is protected !!
Scroll to Top