4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಮನಗರ, ಜು.23. 4 ವರ್ಷದ ಹೆಣ್ಣು ಮಗುವನ್ನು ಸಂಬಂಧಿಯೇ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ರಾತ್ರಿ ಪತ್ತೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್‌ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಂತ್ರಸ್ತ ಮಗುವಿನ ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್‌ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.

Also Read  ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ           

ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ, ತಾಯಿ ಅಕ್ಕಪಕ್ಕ ಹುಡುಕಾಡಿದರು. ಕಡೆಗೆ, ಅಂಗಡಿಗೆ ಮಗು ಕರೆದೊಯ್ದಿದ್ದ ಆರೋಪಿಗೆ ಕರೆ ಮಾಡಿದಾಗ ಆತ, ‘ನನಗೇನೂ ಗೊತ್ತಿಲ್ಲ’ ಎಂದು ಕರೆ ಸ್ಥಗಿತಗೊಳಿಸಿ, ಮೊಬೈಲ್ ಫೋನ್ ಸ್ವಿಚ್‌ ಆಫ್ ಮಾಡಿಕೊಂಡಿದ್ದ. ಅನುಮಾನಗೊಂಡ ತಾಯಿ ಠಾಣೆಗೆ ದೂರು ಕೊಟ್ಟಿದ್ದರು ಎನ್ನಲಾಗಿದೆ.

 

error: Content is protected !!
Scroll to Top