ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.24. ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ಉರುಳಿಬಿದ್ದ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಏಕಾಏಕಿ ವಿದ್ಯುತ್ ಕಂಬ ಉರುಳಿಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಈಗಾಗಲೇ ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸುತ್ತಲೂ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂದರ್ಭ ಸವಾರರಿಗೆ ಚಾಲಕರಿಗೆ ಗೊಂದಲಗಳು ಉಂಟಾಗುತ್ತಿತ್ತು. ಇನ್ನು ಈ ಘಟನೆಯಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು ಎನ್ನಲಾಗಿದೆ.

Also Read   ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು ➤ಸಚಿವ ಬಿಸಿ.ನಾಗೇಶ್ 

ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಅಗ್ನಿ ಶಾಮಕ ದಳದ ಸಿಬ್ಬಂದಿ, ಬಂಟ್ವಾಳ ನಗರ ಹಾಗೂ ಸಂಚಾರಿ ಪೊಲೀಸರು ಭೇಟಿ ನೀಡಿ ವಿದ್ಯುತ್ ಕಂಬ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

 

error: Content is protected !!
Scroll to Top