ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿದ್ದು, ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.  ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.  ದ.ಕ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಕಾಂಗ್ರೆಸ್ ತೊರೆದು ಬಿಎಸ್‌ಪಿ ಪಕ್ಷದಿಂದ ಕಣಕ್ಕಿಳಿದ ಅಖಂಡ ಶ್ರೀನಿವಾಸಮೂರ್ತಿ

error: Content is protected !!
Scroll to Top