ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ.  ಮೃತ ಯುವತಿಯನ್ನು ನಯನಾ (17) ಎಂದು ಗುರುತಿಸಲಾಗಿದೆ.

ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.

 

Scroll to Top