ನೀಟ್ ಯುಜಿ ಮರುಪರೀಕ್ಷೆಯ ಮನವಿ ತಿರಸ್ಕರಿಸಿದ ಸುಪ್ರಿಂ ಕೋರ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಜು.24. ನೀಟ್ಯು್ಜಿ 2024 ಮರುಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಗೆ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎನ್ನಲಾಗಿದೆ.


ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿತು.ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ತೋರಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಪೀಠ ಹೇಳಿದೆ.

Also Read  ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ


ನೀಟ್ಯುೆಜಿ 2024 2024 ರ ರದ್ದತಿಗೆ ಆದೇಶ ನೀಡುವುದು ನ್ಯಾಯಸಮ್ಮತವಲ್ಲ. ಪರೀಕ್ಷೆಯ ಫಲಿತಾಂಶವು ದುರ್ಬಲವಾಗಿದೆ ಅಥವಾ ಪರೀಕ್ಷೆಯ ವ್ಯವಸ್ಥಿತ ಉಲ್ಲಂಘನೆಯಾಗಿದೆ ಎಂಬ ತೀರ್ಮಾನಕ್ಕೆ ಕಾರಣವಾಗಲು ದಾಖಲೆಯಲ್ಲಿ ಸಾಕಷ್ಟು ಸಾಕ್ಷಿಗಳ ಕೊರತೆ ಇದೆ. ವಿವಾದಾತ್ಮಕ ಪ್ರಶ್ನೆಗೆ ಸರಿಯಾದ ಉತ್ತರವನ್ನು ದೆಹಲಿಯ ಐಐಟಿ ಸಮಿತಿಯಿಂದ ಕೋರ್ಟ್ ಮಾಹಿತಿ ಪಡೆದು ಒಪ್ಪಿಕೊಂಡಿದ್ದು, ಈ ಆಧಾರದ ಮೇಲೆ ಫಲಿತಾಂಶಗಳನ್ನು ಮರು ಲೆಕ್ಕಾಚಾರ ಮಾಡಲು ಎನ್ಟಿಯಎಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿದುಬಂದಿದೆ.

 

error: Content is protected !!
Scroll to Top