ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ . ಮೃತರನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ಮಾತ್ರ ನಿಗೂಡವಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.

error: Content is protected !!

Join the Group

Join WhatsApp Group