ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಳ್ಳಾಲ: ಯುವಕರಿಬ್ಬರು ಸಮುದ್ರಪಾಲು – News Kadaba

ಉಳ್ಳಾಲ: ಯುವಕರಿಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.28. ಪ್ರವಾಸಕ್ಕೆಂದು ಬಂದಿದ್ದ ತುಮಕೂರು ಮೂಲದ ಇಬ್ಬರು ಯುವಕರು ಸಮುದ್ರ ಸ್ನಾನಕ್ಕಿಳಿದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರುಪಾಲಾದ ಘಟನೆ ಉಳ್ಳಾಲದ ಮೊಗವೀರಪಟ್ನದಲ್ಲಿ ಇಂದು ಬೆಳಗ್ಗೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿವಾಸಿಗಳಾದ ಅಯಾಝ್(19) ಹಾಗೂ ಶಾರೂಕ್(19) ಅಲೆಗಳ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾದವರಾಗಿದ್ದಾರೆ.

ಉಳ್ಳಾಲ ದರ್ಗಾಕ್ಕೆ ಆಗಮಿಸಿದ್ದ ಇವರು ಸ್ನಾನಕ್ಕೆಂದು ಸಮುದ್ರಕ್ಕಿಳಿದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರಪಾಲಾದರೆನ್ನಲಾಗಿದೆ. ಇದೇ ವೇಳೆ ಸಮುದ್ರಪಾಲಾಗುತ್ತಿದ್ದ ಇನ್ನಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದು, ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅಯಾಝ್, ಶಾರೂಕ್ ಸೇರಿದಂತೆ ಸುಮಾರು 10 ಮಂದಿ ಸಂಬಂಧಿಕರು ಇಂದು ಬೆಳಗ್ಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಬಳಿಕ ಇವರು ಮೊಗವೀರಪಟ್ನದ ಸಮುದ್ರ ಕಿನಾರೆಗೆ ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ಸ್ನಾನಕ್ಕಿಳಿದಿದ್ದ ಕೆಲವರ ಪೈಕಿ ಅಯಾಝ್ ಮತ್ತು ಶಾರೂಕ್ ಬೃಹತ್ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ.

Scroll to Top