(ನ್ಯೂಸ್ ಕಡಬ)newskadaba.com. ಪ್ಯಾರಿಸ್, ಜು.24. ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್ ರೇಪ್ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಫ್ರೆಂಚ್ ಪೊಲೀಸರು ತಿಳಿಸಿದ್ದಾರೆ.
25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಈ ಅವಘಡ ಸಂಭವಿಸಿದ್ದು, ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕೆಬಾಬ್ ಶಾಪ್ ಗೆ ಬಂದು ರಕ್ಷಣೆ ಪಡೆದಿದ್ದಾರೆ. ಆಗ ಆಕೆಯ ಉಡುಪು ಹರಿದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂತಸ್ತ ಮಹಿಳೆಯು ಮೌಲಿನ್ ರೋಗ್ ಕ್ಯಾಬರ್ಟ್‌ನ ಬಾರ್ಸ್ & ಕ್ಲಬ್ಸ್‌ನಲ್ಲಿ ಮದ್ಯಪಾನ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ಅನಿರ್ದಿಷ್ಟ ಪ್ರದೇಶಕ್ಕೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾಗಿ 25 ವರ್ಷದ ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ.