ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಕಾರಾಗೃಹದ ಮೇಲೆ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಮೊಬೈಲ್‌ ಸೇರಿ ಹಲವು ನಿಷೇಧಿತ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.


ಕೋಡಿಯಾಲ್ ಬೈಲ್ ನಲ್ಲಿರುವ ಜೈಲಿನಲ್ಲಿರುವ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪೊಲೀಸ್‌ ಇನ್ಸ್‌ ಪೆಕ್ಟರ್‌ಗಳ ನೇತೃತ್ವದಲ್ಲಿ ಸುಮಾರು 150 ಮಂದಿ ಸಿಬ್ಬಂದಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಲಾಗಿದೆ. ಹಲವು ವಿಚಾರಣಾಧೀನ ಕೈದಿಗಳ ಬಳಿ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಸಾಧನ, 5 ಇಯರ್‌ಫೋನ್‌, ಒಂದು ಪೆನ್ ಡ್ರೈವ್, 5 ಚಾರ್ಜರ್‌, ಒಂದು ಜತೆ ಕತ್ತರಿ, 3 ಕೇಬಲ್‌, ಗಾಂಜಾ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Also Read  ಕೃಷಿ ಪ್ರಶಸ್ತಿ ಅರ್ಜಿ ಆಹ್ವಾನ

error: Content is protected !!
Scroll to Top