ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು !

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.25. ಭಾರೀ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಗಾಳಿ-ಮಳೆಗೆ ಮಂಗಳೂರು ಹೊರವಲಯದ ಸುರತ್ಕಲ್‌ ಸಮೀಪವಿರುವ ಜೋಕಟ್ಟೆಯಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ.

ಮೃತ ಬಾಲಕನನ್ನು ಶೈಲೇಶ್ (17) ಎಂದು ಗುರುತಿಸಲಾಗಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

error: Content is protected !!
Scroll to Top