ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ      

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ ಎನ್ನಲಾಗಿದೆ.

ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಪ್ರಜ್ವಲ್​ ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ, ಕೋರ್ಟ್​, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೀಗ ಹೈಕೋರ್ಟ್​ ಮೆಟ್ಟಿಲೇರುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿದುಬಂದಿದೆ.

Also Read  ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.!

 

 

error: Content is protected !!
Scroll to Top