ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು ಎನ್ನಲಾಗಿದೆ. ಮಂಗಳೂರಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ್ದರು.

Also Read  ಸುಬ್ರಹ್ಮಣ್ಯ - ಧರ್ಮಸ್ಥಳ ಹೆದ್ದಾರಿಯಲ್ಲಿ ಮರಣ ಮೃದಂಗ ಬಾರಿಸುತ್ತಿರುವ ವಾಹನ ➤ ಕಳೆದ 10 ತಿಂಗಳಿಂದ ರಸ್ತೆ ಮಧ್ಯೆ ಕೆಟ್ಟು ನಿಂತ ಬೃಹತ್ ಕ್ರೇನ್

ಅವರ ಉತ್ಸಾಹಭರಿತ, ಶಕ್ತಿಯುತ ಮತ್ತು ಪರೋಪಕಾರಿ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದರು. ಮನರಂಜನಾ ಉದ್ಯಮಕ್ಕೆ ಪಿಂಟೋ ಅವರ ಕೊಡುಗೆಗಳು ವ್ಯಾಪಕವಾಗಿ ಗುರುತಿಸಲ್ಪಟ್ಟವರು. ಅವರ ಅಕಾಲಿಕ ನಿಧನದಿಂದ ಚಿತ್ರರಂಗ ಆಘಾತಕ್ಕೊಳಗಾಗಿದೆ.ಯುಜಿನ್ ವಿಲ್ಫ್ರೆಡ್ ಪಿಂಟೋ ಗುರ್ಪುರ್ ಮೂಲದವರಾಗಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

 

error: Content is protected !!
Scroll to Top