ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

crime, arrest, suspected

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು.


ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ ನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು ಎನ್ನಲಾಗಿದ್ದು, ವಿಟ್ಲ ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಡ್ರಗ್ ವ್ಯಸನಿಗಳ ಸಂಖ್ಯೆ ಸಾಕಷ್ಟಿದ್ದು ಸಭ್ಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸಾರ್ವಜನಿಕರ ಆರೋಪ ಕೇಳಿಬಂದಿದೆ.

Also Read  ಮಂಗಳೂರು: ನಕಲಿ ನೋಟಿನಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹ...! ➤ ದೇವಸ್ಥಾನದ ಹುಂಡಿಯಲ್ಲಿ ನೋಟಿನ ಜೊತೆಗೆ ಬಳಸಿದ ಕಾಂಡೋಮ್ ಹಾಕಿ ವಿಕೃತಿ ಮೆರೆದ ಪಾಪಿಗಳು

error: Content is protected !!
Scroll to Top