38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ರಾಜ್ಯಾದ್ಯಂತ ದಾಖಲೆಯ 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ ಎನ್ನಲಾಗಿದೆ.

ವಿಧಾನ ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಯಾವುದೇ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎರಡರಷ್ಟು ರೈತರಿಗೆ ಬರ ಪರಿಹಾರ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಮಾಹಿತಿ ನೀಡಿದರು.

Also Read  ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                        

 

 

error: Content is protected !!
Scroll to Top