ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌ ಶೀಘ್ರದಲ್ಲೇ ಗೌರವಧನ ಹೆಚ್ಚಳ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.

ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

Also Read  ಉಡುಪಿ: ಸಚಿವ ಮಾಧುಸ್ವಾಮಿ ಶ್ರೀ ಕೃಷ್ಣಮಠಕ್ಕೆ ಭೇಟಿ

 

 

error: Content is protected !!
Scroll to Top