ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆ ಕಾಲ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಅಲ್ಲಿಂದ ನಿರ್ಗಮಿಸಿದರು.

Also Read  ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

 

 

 

error: Content is protected !!
Scroll to Top