(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.25. ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಹೂತಿಟ್ಟಿದ್ದನು. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರ ತನಿಖೆಯಿಂದ ವಿಚಾರ ಬೆಳಕಿಗೆ ಬಂದಿದೆ.
