ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಳೆಗಾಲದ ಅಧಿವೇಶನ ಮುಗಿಯಲು 2 ದಿನ ಬಾಕಿ ಇರುವಂತೆ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ ಹಾಜರಿರುವಂತೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ.


ಇನ್ನೆರಡು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ ಎಂದು ವರದಿ ತಿಳಿಸಿದೆ.

Also Read  ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್

error: Content is protected !!
Scroll to Top