(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಾಟಿ ಉಪಸ್ಥಿತರಿದ್ದರು ಎನ್ನಲಾಗಿದೆ.