ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿರುವ ಪ್ರತಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಡೆಸಿರುವ ಅಹೋರಾತ್ರಿ ಧರಣಿ ರಾಜಕೀಯ ನಾಟಕವಷ್ಟೇ ಎಂದು ಕಾನೂನು ಸಚಿವ ಹೆಚ್‌.ಕೆ. ಪಾಟೀಲ್ ಅವರು ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಪರ್ಯಾಯ ನಿವೇಶನ (ಪ್ಲಾಟ್‌) ಹಗರಣ ವಿಚಾರವನ್ನು ಚರ್ಚೆಗೆ ಏಕೆ ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂಬುದನ್ನು ವಿವರಿಸಿದರೂ ಬಿಜೆಪಿಯು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು.

ಮುಡಾದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ತನಿಖೆಗೆ ಆಯೋಗ ರಚಿಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮ ವಿರುದ್ಧ ಆರೋಪ ಬಂದಾಗ ಈ ರೀತಿ ತನಿಖಾ ಆಯೋಗ ರಚಿಸಿದ ಉದಾಹರಣೆ ಇದೆಯೇ? ಪ್ರಶ್ನಿಸಿದರು ಎಂದು ವರದಿ ತಿಳಿಸಿದೆ.

 

error: Content is protected !!

Join the Group

Join WhatsApp Group