ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.26. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಅಟೋ ರಿಕ್ಷಾ ಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22)  ಎಂದು ಗುರುತಿಸಲಾಗಿದೆ.

ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು

 

error: Content is protected !!
Scroll to Top