ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಜು.26. ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ ಎನ್ನಲಾಗಿದೆ.

ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಅವರಿಗೆ ಈ ಸೌಲಭ್ಯವನ್ನು ನೀಡಲು ಆಗುವುದಿಲ್ಲವೆಂದು ಕೋರ್ಟ್‌ ಹೇಳಿದೆ. ಜೈಲು ನಿಯಾಮವಳಿ 728ರ ಪ್ರಕಾರ ಕೊಲೆ ಆರೋಪಿಗಳಿಗೆ ಈ ಸೌಲಭ್ಯಗಳನ್ನು ನೀಡಲು ಸಾಧ್ಯವಿಲ್ಲವೆಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ ಎಂದು ತಿಳಿದುಬಂದಿದೆ.

Also Read  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

 

error: Content is protected !!
Scroll to Top