ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಿರಂತರ ಮಳೆಗೆ ಹಲವು ಜಲಾಶಯಗಳು ಭರ್ತಿ ಆಗಿದ್ದು, ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ರಜೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.


ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳ‌ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.ಹಾವೇರಿ ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯಿತ್ತಿದೆ. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ ಘೋಷಿಸಲಾಗಿದೆ. ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶಿಸಿದ್ದಾರೆ.

Also Read  ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

 

error: Content is protected !!
Scroll to Top