ಕಾರ್ಗಿಲ್ ವಿಜಯ ದಿನ ಲಡಾಕ್ ನ ದ್ರಾಸ್ ನಲ್ಲಿ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

(ನ್ಯೂಸ್ ಕಡಬ)newskadaba.com ಲಡಾಖ್, ಜು.26. ಕಾರ್ಗಿಲ್ ವಿಜಯ್ ದಿವಸದ 25 ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್‌ ನಲ್ಲಿದ್ದಾರೆ. ಕಾರ್ಗಿಲ್ ಯುದ್ಧದ 25 ನೇ ವಾರ್ಷಿಕೋತ್ಸವದಂದು ಲಡಾಖ್‌ ಗೆ ಭೇಟಿ ನೀಡಿದ ಪ್ರಧಾನಿ ಮೋದಿಯವರು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ವೀರಮರಣವನ್ನು ಕಂಡ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು ಎನ್ನಲಾಗಿದೆ.


ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್‌ ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Also Read  ಸುಳ್ಳು ನೆಪವೊಡ್ಡಿ 'ಆಕೆ'ಗೆ ಆತ ಮಾಡಿದ್ದೇನು ಗೊತ್ತಾ..!!?

 

error: Content is protected !!
Scroll to Top