ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.


ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

Also Read  ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

error: Content is protected !!
Scroll to Top